Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Going to fulfill all my promises: Kumaraswamy

ನಾನು ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ: ಸಿಎಂ ಕುಮಾರಸ್ವಾಮಿ

Court of inquiry ordered against Major Gogoi

ಮೇಜರ್ ಗೊಗೊಯಿ ವಿರುದ್ಧ ಸೇನಾ ಕೋರ್ಟ್ ತನಿಖೆಗೆ ಆದೇಶ

IPL 2018: SRH Beat KKR By 13 Runs

ಐಪಿಎಲ್ 2018: ರಶೀದ್‌ ಖಾನ್ ಆಲ್‌ರೌಂಡ್‌ ಆಟ, ಕೆಕೆಆರ್ ಸೋಲಿಸಿ ಹೈದರಾಬಾದ್ ಫೈನಲ್ ಗೆ ಲಗ್ಗೆ

Special NIA court convicts five Indian Mujahideen militants in Bodh Gaya serial blasts case

ಬೋದ್ ಗಯಾ ಸರಣಿ ಬಾಂಬ್ ಸ್ಫೋಟ; ಇಂಡಿಯನ್ ಮುಜಾಹಿದ್ದೀನ್ ನ 5 ಉಗ್ರರು ದೋಷಿಗಳು

Saalumarada Thimmakka

ಸಾಲು ಮರದ ತಿಮ್ಮಕ್ಕ ಚೆನ್ನಾಗಿದ್ದಾರೆ, ಮಗ ವನಸಿರಿ ಉಮೇಶ್ ಸ್ಪಷ್ಟನೆ

Can

ಸರ್ಕಾರಿ ಬಂಗಲೆ ಸ್ಮಾರಕವಾಗಿ ಬದಲು, ಮನೆ ಖಾಲಿ ಮಾಡಲ್ಲ: ಮಾಯಾವತಿ

Trying To Find Immediate Solution For Fuel Prices: Dharmendra Pradhan

ತೈಲ ಬೆಲೆ ಏರಿಕೆ ನಿಯಂತ್ರಣಕ್ಕೆ ತಕ್ಷಣದ ಪರಿಹಾರಕ್ಕೆ ಯತ್ನ: ಧರ್ಮೇಂದ್ರ ಪ್ರಧಾನ್

Female police constable undergoes sex-change surgery in Mumbai

ಮುಂಬೈ: ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಯಶಸ್ವಿ, ಪುರುಷನಾಗಿ ಬದಲಾದ ಮಹಿಳಾ ಪೋಲೀಸ್ ಪೇದೆ

Sikh Sub-Inspector saves Muslim youth from lynching mob, averts communal flare-up

ಉತ್ತರಾಖಂಡ: ಮುಸ್ಲಿಂ ಯುವಕನನ್ನು ಉದ್ರಿಕ್ತರಿಂದ ರಕ್ಷಿಸಿದ ಸಿಕ್ಖ್ ಇನ್ಸ್ ಪೆಕ್ಟರ್

President Kovind appoints Odisha, Mizoram Governors

ಒಡಿಶಾ, ಮಿಜೋರಾಂಗೆ ನೂತನ ರಾಜ್ಯಪಾಲರ ನೇಮಕ

Amit Shah

ಎಸ್ ಪಿ, ಬಿಎಸ್ ಪಿ ಮೈತ್ರಿ ಬಿಜೆಪಿಗೆ ಸವಾಲು: ಅಮಿತ್ ಶಾ

Casual photo

ನಾಳೆ ಸಿಬಿಎಸ್ ಇ 12 ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟ

India

ಭಾರತದ ವಿದೇಶಿ ಮೀಸಲು 2..64 ಬಿಲಿಯನ್ ಡಾಲರ್ ನಷ್ಟು ಇಳಿಕೆ!

ಮುಖಪುಟ >> ಭವಿಷ್ಯ-ಆಧ್ಯಾತ್ಮ

ಶಂಕರರಿಲ್ಲದಿದ್ದಿದ್ದರೆ ಇಂದು ವೇದಾಂತ ತತ್ವ ಯಾರಿಗೂ ಅರ್ಥವಾಗುತ್ತಿರಲಿಲ್ಲ, ಭಾರತ ಭಾರತವಾಗೇ ಉಳಿಯುತ್ತಿರಲಿಲ್ಲ!

Adi Shankaracharya

ಆದಿ ಶಂಕರಾಚಾರ್ಯ

ಅನಾದಿ ಕಾಲದಿಂದಲೂ ವೇದ ಭೂಮಿಯಾಗಿರುವ ಭಾರತ ಸಾರಿದ್ದು ಅದ್ವೈತ ಸಿದ್ಧಾಂತವನ್ನೇ. ವೇದಗಳ ಅದ್ವೈತ ಸಾರವನ್ನು ವೇದವ್ಯಾಸರಿಂದ ಯಾಜ್ಞವಲ್ಕ್ಯವರೆಗೂ ಸಾರಿದ್ದಾರೆ, ವೇದಾಂತ ಸಿದ್ಧಾಂತದ ಅದ್ವೈತವನ್ನು ದೃಢವಾಗಿ ಪ್ರತಿಪಾದಿಸಿದ್ದಾರೆ. 

ಅದ್ವೈತ ಸಿದ್ಧಾಂತ ವೇದ-ಉಪನಿಷತ್ ಗಳಲ್ಲೇ ಸ್ಪಷ್ಟವಾಗಿ ಉಲ್ಲೇಖವಾಗಿತ್ತು. ಕಾಲಕ್ರಮೇಣ ಧರ್ಮಕ್ಕೆ ಗ್ಲಾನಿಯುಂಟಾದಾಗ ಪಂಡಿತರೂ ವಿದ್ವಾಂಸರು ತಪ್ಪಾಗಿ ಅರ್ಥೈಸಿಕೊಂಡು ಅದ್ವೈತವನ್ನು ಮರೆತರು. ಜ್ಞಾನ ಮಾರ್ಗಕ್ಕಿಂತ ಕರ್ಮಕಾಂಡಕ್ಕೆ ಹೆಚ್ಚಿನ ಮಹತ್ವ ಕೊಟ್ಟಿದ್ದರು. ಶೃತಿ (ವೇದ)ಯ ಸಿದ್ಧಾಂತದ ಮೂಲ ಉದ್ದೇಶಕ್ಕೆ ಧಕ್ಕೆ ಉಂಟಾದಂತೆಲ್ಲಾ ಧರ್ಮಕ್ಕೂ ಗ್ಲಾನಿಯುಂಟಾಗಿತ್ತು. ಮೂಲ ತತ್ವವನ್ನೇ ಮರೆತು ಜಡವಾಗುತ್ತಿದ್ದ ಭಾರತವನ್ನು, ಭಾರತದ ತತ್ವವನ್ನು ಪುನಃ ಸ್ಥಾಪಿಸಲು, ಶೃತಿ ಸಾರವನ್ನು ಸರಿಯಾದ ರೀತಿಯಲ್ಲಿ ಅರ್ಥ ಮಾಡಿಸುವ ಜ್ಞಾನಿಯ ಅಗತ್ಯತೆ ಶಂಕರರ ಕಾಲದಲ್ಲಿ ಅತ್ಯವಶ್ಯಕವಾಗಿತ್ತು. ದಾರಿ ತಪ್ಪಿದವರನ್ನು ಸರಿ ದಾರಿಗೆ ತರುವ ಕೆಲಸವನ್ನು ಶಂಕರರು ಸಮರ್ಥವಾಗಿ ಮಾಡಿದರೇ ಹೊರತು ಹೊಸ ಸಿದ್ಧಾಂತವನ್ನು ತಾವಾಗಿಯೇ ಸೃಷ್ಟಿಸಿ ಅದನ್ನು ಪ್ರಚಾರ ಮಾಡಲಿಲ್ಲ. ಹಾಗಾಗಿಯೇ ಶಂಕರರ ಸಿದ್ಧಾಂತ ಇಂದಿಗೂ, ಎಂದಿಗೂ ಅಪ್ರಕಂಪ್ಯವಾಗಿ ಉಳಿಯಲು ಸಾಧ್ಯವಾಗಿದೆ. 
 
ಶಂಕರ ಭಗವತ್ಪಾದರ ಗುರುಗಳಾಗಿದ್ದ ಗೌಡಪಾದರೇ ಮಾಯಾಮಾತ್ರಂ ಇದಂ ದ್ವೈತಂ, ಅದ್ವೈತಂ ಪರಮಾರ್ಥತಃ ಎಂದು ಹೇಳಿದ್ದರು. ಆದರೆ ಇದನ್ನು ಸರಿಯಾಗಿ ಅರ್ಥಮಾಡಿಕೊಳ್ಳದ ಸಾಂಖ್ಯಾದಿಗಳು ಪ್ರತಿಪಾದಿಸಿದ್ದ ದ್ವೈತದಲ್ಲೇ ಮುಳುಗಿದ್ದ ಪಂಡಿತರು, ಶೃತಿಯ ಸಾರವನ್ನು ತಪ್ಪಾಗಿ ಅರ್ಥೈಸಿಕೊಂಡು ಕರ್ಮಕಾಂಡಕ್ಕೇ ಹೆಚ್ಚಿನ ಮಹತ್ವ ನೀಡಿ ಜ್ಞಾನ ಮಾರ್ಗವನ್ನು ನಿರಾಕರಿಸಿದ್ದರು. ಅಂದರೆ ವೇದಗಳಲ್ಲಿ ಹೇಳಿದ ಒಂದು ಹಂತವನ್ನು ಬಿಟ್ಟು ಮುಂದಕ್ಕೆ ಹೋಗದೇ ಜಡವಾಗಿ ಅಂಟಿಕೊಂಡು ಕರ್ಮಕಾಂಡದಿಂದ ಮೋಕ್ಷ ಪ್ರಾಪ್ತಿ ಎಂಬ ಭ್ರಮೆಯಲ್ಲಿದ್ದರು. ಅದನ್ನು ಕಳಚಿದ್ದೇ ಶಂಕರರು. ಶಂಕರರು ಕೇವಲ ಅಜ್ಞಾನವನ್ನಷ್ಟೇ ಕಳೆಯಲಿಲ್ಲ. ವಿಷಕಂಠ ಹಾಲಾಹಲವನ್ನು ತಾನು ಸೇವಿಸಿ ಅಮೃತವನ್ನು ನೀಡಿ ದೇವತೆಗಳನ್ನು, ಸೃಷ್ಟಿಯನ್ನು ರಕ್ಷಿಸಿದಂತೆ, ಬಂದ ಕಷ್ಟಗಳನ್ನೆಲ್ಲಾ ಎದುರಿಸಿ ಅಜ್ಞಾನದ ರೂಪದಲ್ಲಿ ಭಾರತದ ಸನಾತನ ಧರ್ಮಕ್ಕೆ ಎದುರಾಗಿದ್ದ ಅಪಾಯವನ್ನೂ ಕಳೆದರು. ಸನಾತನ ಧರ್ಮವನ್ನು ಪುನಃ ಪ್ರತಿಷ್ಠಾಪಿಸಿ, ಅದ್ವೈತದ ಸುಧೆಯನ್ನು ಅನುಗ್ರಹಿಸಿದರು. 

ಆದರೆ ಪ್ರಸ್ತುತ ನಾವೆಲ್ಲಾ ಎಷ್ಟು ಅಜ್ಞಾನಿಗಳಾಗಿದ್ದೇವೆ ಎಂದರೆ ಸನ್ಯಾಸಿ ಎಂದರೆ ಕೇವಲ ಮೂಗು ಹಿಡಿದು ತಪಸ್ಸು ಮಾಡುವುದು ಅಥವಾ ಲೋಕ ವ್ಯವಹಾರಗಳಿಂದ ದೂರವಿದ್ದುಬಿಡುವುದು ಅಥವಾ ಒಂದು ವ್ಯವಸ್ಥೆಯಿಂದ ದೂರ ಇರುವುದು ಎಂಬ ಭಾವನೆ ಗಟ್ಟಿಯಾಗುತ್ತಿವೆ. ಆದರೆ ಭಾರತದ ಉಸಿರಾಗಿರುವ ತರ್ಕಬದ್ಧ ವಿಚಾರ ಮಂಡನೆ ಅಂದರೆ ಲಾಜಿಕ್ ನಲ್ಲಿ ನಮ್ಮ ಸನಾತನ ಧರ್ಮ ಅದೆಷ್ಟು ಮುಂದುವರೆದಿತ್ತು ಎನ್ನುವುದಕ್ಕೆ ಶಂಕರರು ಅತ್ಯುತ್ತಮ ಉದಾಹರಣೆಯಾಗಿ ನಿಲ್ಲುತ್ತಾರೆ. ಎಷ್ಟರ ಮಟ್ಟಿಗೆ ಎಂದರೆ ಸಾವಿರ ವರ್ಷಗಳು ಕಳೆದರೂ ಅವರ ತರ್ಕಬದ್ಧ ಮಂಡನೆ ಈ ಕ್ಷಣಕ್ಕೂ ಮಾದರಿಯಾಗುತ್ತದೆ. ವಿರೋಧಿಗಳೂ ಸಹ ತಮ್ಮ ವಾದದ ಸೌಧ ಕಟ್ಟುವುದಕ್ಕೆ ಶಂಕರರನ್ನೇ ಅಡಿಪಾಯವನ್ನಾಗಿರಿಸಿಕೊಳ್ಳುತ್ತಾರೆ. ಒಂದು ವಿಷಯದ ಬಗ್ಗೆ ಎರಡು ಪಕ್ಷಗಳ ನಡುವಿನ ವಾದ ಎಂದರೆ ಶಂಕರರು-ಮಂಡನ ಮಿಶ್ರರ ನಡುವಿನ ವಾದ ಸರಣಿಯೇ ಇಂದಿಗೂ ಮಾದರಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಧ್ಯಯನಕ್ಕೆ ಸೂಕ್ತ ಉದಾಹರಣೆ. 

ನಾವೆಲ್ಲಾ ಯೂತ್ ಐಕಾನ್ ಎಂದು ಪ್ರತಿ ಜನವರಿ 12 ರಂದು ಆರಾಧಿಸುವ ವಿವೇಕಾನಂದರು ಸಹ  ಶಂಕರಭಗವತ್ಪಾದರ ಕುರಿತು "In Shankaracharya we saw tremendous intellectual power, throwing the scorching light of reason upon everything. We want today that bright sun of intellectuality joined with the heart of Buddha", ಅಂದರೆ "ಶಂಕರಭಗವತ್ಪಾದರು ಪ್ರಚಂಡ ಬೌದ್ಧಿಕ ಶಕ್ತಿಯನ್ನು ಹೊಂದಿದ್ದರು "ನಮಗೆ ಈಗ ಅಗತ್ಯವಿರುವುದು ಶಂಕರರ ರೀತಿಯ ಬುದ್ಧಿಮತ್ತೆ ಹಾಗೂ ಬುದ್ಧನ ರೀತಿಯ ಪ್ರೀತಿ ಎಂದಿದ್ದಾರೆ. ಅಷ್ಟೇ ಏಕೆ ಸ್ವಾಮಿ ವಿವೇಕಾನಂದರ ಗುರುಗಳಾಗಿದ್ದ ರಾಮಕೃಷ್ಣ ಪರಮಹಂಸರಿಗೂ ಸಹ ಪ್ರೇರಕ ಶಕ್ತಿಯಾಗಿದ್ದದ್ದು ಇದೇ ಶಂಕರ ಭಗವತ್ಪಾದರು. 

ಇಂದು ಇಡೀ ಭಾರತವೇ ಯೂತ್ ಐಕಾನ್ ಎಂದು ಮೆಚ್ಚಿ ಮೆರೆಸುವ ಇತ್ತೀಚಿನ ವಿವೇಕಾನಂದರಂತಹ ಧೀಶಕ್ತಿಯುಳ್ಳ ಸನ್ಯಾಸಿಗೇ ಆರಾಧ್ಯ ಮೂರ್ತಿಯಾಗಿದ್ದರು 12 ಶತಮಾನಗಳ ಹಿಂದಿನ ಶಂಕರ ಭಗವತ್ಪಾದರು! 

ಅಲ್ಲವೇ? 8 ವರ್ಷದ ಬಾಲ ಸನ್ಯಾಸಿ. 12 ಶತಮಾನಗಳ ಹಿಂದೆ ಯಾವ ಸಂಚಾರ ವ್ಯವಸ್ಥೆ? ಕೇರಳದ ಕಾಲಟಿಯೆಲ್ಲಿ? ನರ್ಮದಾ ನದಿಯ ತಟದ ಗುಹೆಯೆಲ್ಲಿ? ಯಾವ ನೆರವು? ಯಾವ ಅರ್ಥವ್ಯವಸ್ಥೆ? ಬುದ್ಧಿ ಚಿಗುರೊಡೆಯುವ ವಯಸ್ಸಿನಲ್ಲೇ ಗುರುವನ್ನು ಅರಸಿ ಹೊರಟರಲ್ಲಾ ಬಾಲ ಸನ್ಯಾಸಿ ಶಂಕರರು ಅವರ ಧೀರೋದಾತ್ತ ಮನಸ್ಥಿತಿ, ವ್ಯಕ್ತಿತ್ವವನ್ನು ಬಣ್ಣಿಸುವುದೆಂತು? ಪದಪುಂಜಗಳು ಸಾಲದೇ ನತಮಸ್ತಕರಾಗುತ್ತೇವೆ ಅಷ್ಟೇ! 

ಶಂಕರರು ತಮ್ಮ ಗುರು ಗೋವಿಂದ ಭಗವತ್ಪಾದರನ್ನು ಸಂದರ್ಶಿಸಿ ತಮ್ಮನ್ನು ಭವ ಸಾಗರದಿಂದ ಮುಕ್ತಗೊಳಿಸಿ ಅನುಗ್ರಹಿಸಬೇಕೆಂದು ಪ್ರಾರ್ಥಿಸುತ್ತಾರೆ. ಆದರೆ ಇದಕ್ಕೆ ಪ್ರತಿಯಾಗಿ " ಈ ಮರ್ತ್ಯ ಶರೀರದಿಂದ ಹೇಗೆ ಭವ ಸಾಗರದಿಂದ ಬಿಡುಗಡೆ ಹೊಂದುವೆ ಎಂದು ಕೇಳುತ್ತಾರೆ ಗೋವಿಂದ ಭಗವತ್ಪಾದರು. ಗುರುಗಳ ಪ್ರಶ್ನೆಗೆ ಉತ್ತರಿಸಿದ್ದ ಶಂಕರರು ಜೀವನ್ಮರಣ ಶರೀರಕ್ಕೇ ಹೊರತು ಆತ್ಮಕ್ಕೆ ಅಲ್ಲ ಎಂದು ಹೇಳುತ್ತಾರೆ, ಗುರುಗಳನ್ನು ಆಶ್ರಯಿಸಿ ಅಧ್ಯಯನ ಮಾಡುವುದಕ್ಕೂ ಮುನ್ನವೇ ಇಂತಹ ಪಾರಮಾರ್ಥಿಕ ಉತ್ತರವನ್ನು ನೀಡುವಷ್ಟು ಜ್ಞಾನಿಗಳಾಗಿದ್ದರಲ್ಲಾ ಶಂಕರರು ಆದ್ದರಿಂದಲೆ ಅವರನ್ನು ಬುದ್ಧಿವಂತಿಕೆಯಲ್ಲಿ ಸೂರ್ಯನಿಗೆ ಹೋಲಿಸಿ ನಮಿಸಿದ್ದೇವೆ. ಆದ್ದರಿಂದಲೇ ಜಗತ್ತು ಶಂಕರರನ್ನು ನಮಾಮಿ ಭಗವತ್ಪಾದಂ ಲೋಕಶಂಕರಂ, ಆರಾದ್ ಜ್ಞಾನದಭಿಸ್ತಿಭಿಹಿ ಪ್ರತಿಹತಶ್ಚನ್ದ್ರಾಯುತೆ ಭಾಸ್ಕರಹ ತಸ್ಮೈ ಶಂಕರ ಭಾನವೇ ತನುಮನೋ ವಾಭಿರ್ನಮಸ್ಕುರ್ಮಹೆ ಎಂದು ಕೊಂಡಾಡಿದೆ. ಕೇವಲ ಕೊಂಡಾಡುವವರಿಗಷ್ಟೇ ಅಲ್ಲ, ಶಂಕರರು ತಮ್ಮನ್ನು ವಿರೋಧಿಸುವವರಿಗೂ ಕೊಂಡಾಡುವವರಷ್ಟೇ ಮುಖ್ಯವಾಗಿದ್ದಾರೆ ಅಥವಾ ಕೊಂಡಾಡುವವರಿಗಿಂತಲೂ ವಿರೋಧಿಸುವವರಿಗೆ ಸ್ವಲ್ಪ ಹೆಚ್ಚಾಗಿಯೇ ಮುಖ್ಯವಾಗಿದ್ದಾರೆ. ಏಕೆಂದರೆ ಶಂಕರರು ಸಂಪ್ರದಾಯಸ್ಥರಾಗಿದ್ದುಕೊಂಡೇ ಶಂಕರರು ಸಂಪ್ರದಾಯಸ್ಥರು ಮಾಡುತ್ತಿದ್ದ ತಪ್ಪುಗಳನ್ನು ವಿರೋಧಿಸಿದ್ದರು, ಕರ್ಮಠರಾಗಿದ್ದುಕೊಂಡೇ ಕರ್ಮಠರ ತಪ್ಪುಗಳನ್ನು ತಿದ್ದಿ ತೀಡಿದರು. 

ಸಾಂಖ್ಯರನ್ನು, ಇತರ ಪ್ರತಿಪಕ್ಷದ ವಿದ್ವಾಂಸರುಗಳನ್ನು ಸಾತ್ವಿಕ ಮಾರ್ಗದಲ್ಲಿ ವಿರೋಧಿಸಿ, ಮರ್ಯಾದೆಯಿಂದಲೆ ಮಣಿಸಿದ್ದರು. ಬೌದ್ಧರ ತಪ್ಪುಗಳನ್ನೂ ತಿದ್ದಿ ಬುದ್ಧಿ ಹೇಳಿದರು. ವೇದಗಳ ಚೌಕಟ್ಟುಗಳನ್ನು ದಾಟದೇ, ವೇದದ ಪರಮ ತತ್ವಕ್ಕೆ ಚ್ಯುತಿ ಬಾರದಂತೆ ಅದ್ವೈತ ಸಿದ್ಧಾಂತವನ್ನು ಸಾರಲು ಅಂದಿನ ಜನರು ವಿಧಿಸಿದ್ದ ಕಟ್ಟುಪಾಡುಗಳನ್ನು ಮೀರಿದರು. ತಾವೊಬ್ಬರೇ ಒಂದು ಪಕ್ಷ ಉಳಿದವರೆಲ್ಲಾ ಒಂದು ಪಕ್ಷ ಎಂಬಂತಿದ್ದಾಗಲೂ ಸಂಚಾರ ವ್ಯವಸ್ಥೆಯೇ ಇಲ್ಲದ ಕಾಲದಲ್ಲಿ ಪ್ರತಿ ನಿತ್ಯವೂ ಯಾತ್ರೆ ಕೈಗೊಂಡರು. ಭಾರತ ದೇಶವನ್ನು ಸುತ್ತಿ, ವಾದ ಮಾಡಿ ಅನೇಕ ದುರಹಂಕಾರಿ ವಿದ್ವಾಂಸರು ತಮ್ಮ ತಪ್ಪನ್ನು ತಾವೇ ಅರ್ಥಮಾಡಿಕೊಳ್ಳುವಂತೆ,  ಜ್ಞಾನ ಮಾರ್ಗದ ಮೂಲಕವೇ ಮೋಕ್ಷ ಪ್ರಾಪ್ತಿ ಎಂಬುದನ್ನು ಒಪ್ಪಿ ಜಿತೋಸ್ಮಿ ಎನ್ನಿಸಿದ್ದರು. ಕರ್ಮಕಾಂಡದಲ್ಲಿ ಅಪ್ರಕಂಪ್ಯವಾದ ನಂಬಿಕೆ ಹೊಂದಿದ್ದ ಮಂಡನ ಮಿಶ್ರರಂತಹ ಪಂಡಿತರನ್ನು ಶಿಷ್ಯರನ್ನಾಗಿಸಿಕೊಂಡರು. ಕೇವಲ 35 ವರ್ಷಗಳಲ್ಲಿನ ಜೀವಿತಾವಧಿಯಲ್ಲಿ ಭಾರತದ ಸನಾತನ ಧರ್ಮದ ಸತ್ವವನ್ನು ಪುನಃ ಪ್ರತಿಷ್ಠಾಪಿಸಿದ ಶಂಕರರಲ್ಲದೇ ಇಂದಿನ ಯುವ ಪೀಳಿಗೆಗೆ, ವಿವೇಕಾನಂದರು ಹೇಳಿದಂತೆ ಭಾರತಕ್ಕೆ ಅಗತ್ಯವಿರುವ ತೀಕ್ಷ್ಣ ಬುದ್ಧಿವಂತಿಕೆಗೆ ಶಂಕರರಲ್ಲದೇ ಮತ್ಯಾರು ತಾನೆ ಪ್ರೇರಕ ಶಕ್ತಿಯಾಗಬಲ್ಲರು? ಭಾರತ ಎದುರಿಸುತ್ತಿರುವ ಬೌದ್ಧಿಕ ದಾಸ್ಯ, ವಿಸ್ಮೃತಿಯಿಂದ ಹೊರಬರಲು ಶಂಕರರಲ್ಲದೇ ಮತ್ಯಾರು ತಾನೆ ಪ್ರೇರೇಪಿಸಬಲ್ಲರು?

ಇಷ್ಟಕ್ಕೂ ನಾವೇಕೆ ಶಂಕರರಿಗೆ ಕೃತಜ್ನರಾಗಿರಬೇಕು ಅಥವಾ ಗೌರವಿಸಬೇಕೆಂದರೆ ಅವರು ಜೀವಿಸಿ- ಮುಕ್ತರಾದ ಸಾವಿರ ವರ್ಷಗಳು ಕಳೆದರೂ ನಾವು ಧರ್ಮದ ವಿಷಯದಲ್ಲಿ ಯಾವುದೇ ಸಮಸ್ಯೆಯನ್ನೂ ಎದುರಿಸದಂತಹ ಸ್ಥಿತಿಯನ್ನು ನಿರ್ಮಾಣ ಮಾಡಿ ಹೋಗಿದ್ದಾರೆ. ಸಾವಿರ ವರ್ಷಗಳು ಕಳೆದರೂ ಧರ್ಮಕ್ಕೆ ವಿಪ್ಲವ ಬರದಂತಹ ವಾತಾವರಣ ನಿರ್ಮಿಸಿದ್ದರು. 

ಇನ್ನು ಕೊನೆಯದಾಗಿ, ಸಾ.ಕೃ ರಾಮಚಂದ್ರರಾಯರಂತಹ ವಿದ್ವಾಂಸರು ತಮ್ಮ ದರ್ಶನ ಪ್ರಬಂಧದಲ್ಲಿ ಶಂಕರರ ಬಗ್ಗೆ ಹೀಗೆ ಬರೆಯುತ್ತಾರೆ, "ನಾಡಿನ ಮೇಧಾವಿಗಳಲ್ಲಿ, ಮಾರ್ಗದರ್ಶಕರಲ್ಲಿ ಬುದ್ಧನನ್ನು ಬಿಟ್ಟರೆ ಶ್ರೀಶಂಕರರದ್ದೆ ಅಗ್ರಸ್ಥಾನ. ಅವರ ಬುದ್ಧಿಶಕ್ತಿ, ವಿಚಾರನೈಪುಣ್ಯ, ಸಂಪ್ರದಾಯಶ್ರದ್ಧೆ, ಸಮನ್ವಯ ಬುದ್ಧಿ, ಲೋಕಾನುಗ್ರಹ ದೃಷ್ಟಿ, ಪ್ರತಿಪಾದನಾ ಸಾಮರ್ಥ್ಯ ಇವೆಲ್ಲವೂ ಅನಾದೃಶ್ಯವಾದುವು. ಅವರ ನಂತರ ತೋರಿಕೊಂಡ ಯಾವ ಪಂಥದ ಆಚಾರ್ಯರಾಗಲಿ ವ್ಯಾಖ್ಯಾನಕಾರರಾಗಲಿ ಅವರ ಬರಹಗಳನ್ನು ಅಲ್ಲಗಳೆಯುವಂತಿರಲಿಲ್ಲ. ಅವರನ್ನು ಅನುಸರಿಸಿದವರಿಗೂ ವಿರೋಧಿಸಿದವರಿಗೂ ಅವರು ಸಮನಾಗಿಯೇ ಉಪಜೀವ್ಯರು! ವೇದಾಂತ ಸಂಪ್ರದಾಯ ಸ್ಪಷ್ಟವಾದುದು ಅವರ ಕಾಲದಲ್ಲಿಯೇ. ಅವರಿಂದಲೇ. ಮುಂದೆ ಒಂದು ಸಾವಿರಕ್ಕೂ ಮಿಕ್ಕು ವರ್ಷಗಳು ಕಳೆದ ಮೇಲೂ ಅವರ ಈ ನಾಡಿದ ಎಲ್ಲರ ನೆನಪಿನಲ್ಲಿ ಅಚ್ಚಳಿಯದೇ ಉಳಿದುಕೊಂಡಿದೆ". 

ಅದ್ವೈತ ತತ್ವ ಸಿದ್ದಾಂತ, ಅದರ ಸಮರ್ಥನೆಗಾಗಿ ಅವರು ಮಾಡಿದ ವಾದ ಮಂಡನೆ, ತರ್ಕ, ಇಡೀ ಜಗತ್ತನ್ನೇ ಬೆರಗುಗೊಳಿಸಿದೆ. ಇಂದು ಶಂಕರ ಜಯಂತಿ.ಸಾವಿರಕ್ಕೂ ಮಿಕ್ಕು ವರ್ಷಗಳು ಕಳೆದರೂ ಅವರ ಸಿದ್ಧಾಂತ ಅಚ್ಚಳಿಯದೇ ಉಳಿದುಕೊಂಡಿದೆ ಎಂದರೆ, ಶಂಕರರಿಲ್ಲದಿದ್ದಿದ್ದರೆ ಯಾವ ಸನಾತನ ಧರ್ಮದ ಅನುಯಾಯಿಗಳು ಇಂದು "ಹಿಂದೂ" ಎಂದು ಹೇಳಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ ಇಂದಿಗೆ ವೇದಾಂತ ತತ್ವ ಎಂದರೆ ಯಾರಿಗೂ ಅರ್ಥವೇ ಆಗುತ್ತಿರಲಿಲ್ಲ. ವೇದಾಂತ ತತ್ವ ಎಂದರೇನು ಎಂಬುದೇ ಅರ್ಥವಾಗದೇ ಇದ್ದಿದ್ದರೆ ಇತ್ತೀಚಿನ ಶತಮಾನಗಳಲ್ಲಿ ನಾವು ರಾಮಕೃಷ್ಣ ಪರಮಹಂಸ, ರಮಣ ಮಹರ್ಷಿಗಳು, ವಿವೇಕಾನಂದರಂತಹವರನ್ನೂ ಕಾಣಲು ಬಹುಶಃ ಸಾಧ್ಯವಾಗುತ್ತಿರಲಿಲ್ಲ. ಅಷ್ಟೇ ಏಕೆ ಅಸಲಿಗೆ ಭಾರತ ಭಾರತವಾಗೇ ಉಳಿಯುತ್ತಿರಲಿಲ್ಲ, ಭಾರತದ ಸನಾತನ ಧರ್ಮ ಜೀವಂತವಾಗಿದ್ದರೆ ಅದಕ್ಕೆ ಶಂಕರರ ಕೊಡುಗೆ ಅಪಾರ.  ಹಾಗಾಗಿಯೇ ಸಾವಿರ ಅಲ್ಲ ಮತ್ತೂ ಸಾವಿರ ವರ್ಷ ಕಳೆದರೂ ಶಂಕರರು ಪ್ರಸ್ತುತ. 

-ಶ್ರೀನಿವಾಸ್ ರಾವ್
srinivas.v4274@gmail.com
Posted by: SBV | Source: Online Desk

ಇನ್ನೂ ವಿವಾಹವಾಗಿಲ್ಲವೇ?
ಇಂದೇ ಕನ್ನಡ ಮ್ಯಾಟ್ರಿಮನಿ ಯಲ್ಲಿ ನೋಂದಾಯಿಸಿ -
ನೋಂದಣಿ ಉಚಿತ!

Topics : Shankara Jayanti, Adi Shankaracharya, Vedanta philosophy, ಶಂಕರ ಜಯಂತಿ, ಆದಿ ಶಂಕರಾಚಾರ್ಯ, ವೇದಾಂತ ತತ್ವ
English summary
About 1200 years ago, there was a grave spiritual emptiness in India. It was during this timing of great spiritual crisis that Sri Adi Shankaracharya was born in a small Indian village called Kalady in Kerala. He revived the teachings of Sanatana Dharma and through the great Upanishadic philosophy of Advaita Vedanta, he taught people that the goal of human existence is self-realization.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ವಿಧಾನಸಭೆ ಚುನಾವಣೆ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS
Advertisement
Advertisement