Kannadaprabha The New Indian Express
ಬೆಂಗಳೂರು: ಸಹೋದ್ಯೋಗಿಗೆ ಲೈಂಗಿಕ ಕಿರುಕುಳ, ಟೆಕ್ಕಿ ವಿರುದ್ಧ ಕೇಸ್ ದಾಖಲು 
By select 
16 May 2018 12:00:00 AM IST

ಬೆಂಗಳೂರು: 27 ವರ್ಷದ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರತಿಷ್ಠಿತ ಐಟಿ ಕಂಪೆನಿಯೊಂದರ ಟೆಕ್ಕಿ ವಿರುದ್ಧ ಕೇಸ್ ದಾಖಲಿಸಲಾಗಿದೆ.

32 ವರ್ಷದ ಸಾಫ್ಟ್ ವೇರ್ ಇಂಜಿನಿಯರ್ ವಿಜಯ್ ಕುಮಾರ್ ಎಂಬುವವರು ಡಿಸೆಂಬರ್ 2016ರಿಂದ ತನಗೆ ನಿರಂತರ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಮೇ 11ರಂದು ಐಪಿಸಿ ಸೆಕ್ಷನ್ 354ಎ ಅಡಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಲಾಗಿದೆ.

ಈ ಸಂಬಂಧ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಬಹುಶಃ ಇದು ಇಬ್ಬರ ನಡುವಿನ ವೈಯಕ್ತಿಕ ಮತ್ತು ಹಣಕಾಸು ವ್ಯವಹಾರ ಪ್ರಕರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇ-ಕಾಮರ್ಸ್ ಕಂಪನಿಯಲ್ಲಿ 7 ಲಕ್ಷ ರುಪಾಯಿ ಹೂಡಿಕೆ ಮಾಡುವಂತೆ ಕುಮಾರ್ ನನಗೆ ಸೂಚಿಸಿದ್ದ. ಬಳಿಕ ಆ ಹಣವನ್ನು ವಾಪಸ್ ಕೇಳಿದಾಗ ನನ್ನೊಂದಿಗೆ ಅನುಚಿತವಾಗಿ ವರ್ತಿಸಲು ಆರಂಭಿಸಿದ. ಕಚೇರಿ ಮತ್ತು ಮನೆಯಲ್ಲಿ ನನ್ನೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಮಹಿಳೆ ದೂರಿದ್ದಾಳೆ.

Copyright � 2012 Kannadaprabha.com