Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Magistrates

ಹಲ್ಲೆ ಪ್ರಕರಣ: ದುನಿಯಾ ವಿಜಯ್ ಗೆ ಇನ್ನು 2 ದಿನ ಜೈಲೇ ಗತಿ!

India

ಪಾಕಿಸ್ತಾನದ 'ತಂತ್ರಗಾರಿಕೆಯ' ಕೃತ್ಯಗಳನ್ನು ನಿಭಾಯಿಸುವ ರೀತಿ ನಮಗೆ ತಿಳಿದಿದೆ: ವಿಶ್ವಸಂಸ್ಥೆಯಲ್ಲಿ ಭಾರತ

Rafale Controversy Can Affect Ties, Says France Government After Hollande

ರಾಫೆಲ್ ವಿವಾದದಿಂದ ಭಾರತ-ಫ್ರಾನ್ಸ್ ಸಂಬಂಧಕ್ಕೆ ಧಕ್ಕೆ: ಫ್ರಾನ್ಸ್ ಆತಂಕ

Darshan

ಮೈಸೂರು: ಕಾರು ಅಪಘಾತದಲ್ಲಿ ನಟ ದರ್ಶನ್, ದೇವರಾಜ್, ಪ್ರಜ್ವಲ್ ಸೇರಿ ನಾಲ್ವರಿಗೆ ಗಾಯ

ಸಂಗ್ರಹ ಚಿತ್ರ

ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷನನ್ನು 2 ಕಿ.ಮೀ ಅಟ್ಟಾಡಿಸಿ ಕೊಚ್ಚಿ ಬರ್ಬರ ಕೊಲೆ!

PM Modi launching Sikkim

ಸಿಕ್ಕಿಂ: ಪಕ್ಯೊಂಗ್ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಸಂಗ್ರಹ ಚಿತ್ರ

ಜೀವದ ಹಂಗು ತೊರೆದು ಕಳ್ಳರಿಂದ ರಕ್ಷಿಸಿದ್ದಕ್ಕೆ ಬರೀ ಟೀ ಶರ್ಟ್ ಗಿಫ್ಟ್, ಸಿಟ್ಟಿಗೆದ್ದು ಮಾಲೀಕನಿಂದ 70 ಲಕ್ಷ ಕದ್ದು ಪರಾರಿ!

Accused in murder of Bajrang Dal activist Prashant Poojary attacked by mob in Karnataka

ಮೂಡಬಿದಿರೆ: ಭಜರಂಗದಳ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಕೊಲೆ ಆರೋಪಿ ಹತ್ಯೆಗೆ ಯತ್ನ!

Man killed after bus hits to home in Malavalli

ಮಂಡ್ಯ: ಮಳವಳ್ಳಿ ಬಳಿ ಮನೆಗೆ ನುಗ್ಗಿದ ರಾಜ್ಯ ರಸ್ತೆ ಸಾರಿಗೆ ಬಸ್, ವ್ಯಕ್ತಿ ಸಾವು, ನಾಲ್ವರಿಗೆ ಗಾಯ!

Nitin Sandesara,

5,000 ಕೋಟಿ ಬ್ಯಾಂಕ್ ವಂಚನೆ: ಗುಜರಾತ್ ಉದ್ಯಮಿ ಸಂದೇಸರ ನೈಜೀರಿಯಾಕ್ಕೆ ಪರಾರಿ?

B S Yedyurappa

2019ರ ಲೋಕಸಭೆ ಚುನಾವಣೆ ನಂತರ ಯಡಿಯೂರಪ್ಪ ಮೂಲೆಗುಂಪು?

Rahul Gandhi

ಭಾರತದ ಕಮಾಂಡರ್ ಇನ್ ಥೀಫ್: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಟ್ವೀಟ್

Namma Metro

ಬೆಂಗಳೂರು: ಶೀಘ್ರವೇ ಆರು ಬೋಗಿಗಳುಳ್ಳ ಮೆಟ್ರೋ ಟ್ರೈನ್ ಸೇವೆ ಆರಂಭ

ಮುಖಪುಟ >> ರಾಜಕೀಯ

ಎಐಸಿಸಿ ನಮಗೆ ದೇವಸ್ಥಾನವಿದ್ದಂತೆ, ಸುಖಾ ಸುಮ್ಮನೆ ಆರೋಪ ಸರಿಯಲ್ಲ: ಡಿಕೆಶಿ

Ramdas

ರಾಮದಾಸ್

ಬೆಂಗಳೂರು: ಕಾಂಗ್ರೆಸ್ ಸರ್ಕಾರ 50 ಕೋಟಿ ರು. ಹಣವನ್ನು ಎಐಸಿಸಿಗೆ ಫಂಡ್ ನೀಡಿದೆ ಎಂದು ಬಿಜೆಪಿ ಶಾಸಕ ಎಸ್ ಎ ರಾಮದಾಸ್ ಆರೋಪಿಸಿದ್ದಾರೆ. 

ಇದೇ ವೇಳೆ ಮಧ್ಯಪ್ರವೇಶಿಸಿದ ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ, ನಿಯಮಾವಳಿ ಪ್ರಕಾರ ಯಾವುದೇ ಸಂಸ್ಥೆ ಹಾಗೂ ವ್ಯಕ್ತಿ ಮೇಲೆ ದಾಖಲೆ ಇಲ್ಲದೆ ಆರೋಪ ಮಾಡುವಂತಿಲ್ಲ. ಹಾಗಾಗಿ ಆರೋಪವನ್ನು ಕಡತದಿಂದ ತೆಗೆಸಿ ಹಾಕಲು ಮುಂದಾದರು. ಇದಕ್ಕೆ ರಾಮದಾಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಯಾರಿಂದ ಲಂಚ ಪಡೆದ್ರು? ಎಐಸಿಸಿಗೆ 50 ಕೋಟಿ ರೂ. ಕಿಕ್ ಬ್ಯಾಕ್ ಹೇಗೆ ಹೋಯ್ತು ಎಂಬುದರ ಬಗ್ಗೆ ಸಂಪೂರ್ಣ ದಾಖಲೆಗಳಿವೆ. ದಾಖಲೆ ಕೊಡಲು ಸಿದ್ಧವಿರುವುದಾಗಿ ಹೇಳಿದರು.

ವಿಧಾನಸಭೆಯಲ್ಲಿ ರಾಮದಾಸ್ ಅವರ ಹೇಳಿಕೆಗೆ ಕಾಂಗ್ರೆಸ್ಸಿನಿಂದ ಭಾರೀ ಆಕ್ಷೇಪ ವ್ಯಕ್ತವಾಯಿತು.

ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಯಾವುದೇ ದಾಖಲೆಗಳಿಲ್ಲದೇ ಕಾಂಗ್ರೆಸ್ ವಿರುದ್ಧ ಕಿಕ್ ಬ್ಯಾಕ್ ಆರೋಪ ಮಾಡಲು ಅವಕಾಶ ಕೊಡುವುದಿಲ್ಲ ಎಂದು ಪಟ್ಟು ಹಿಡಿದರು. ನಮಗೆ ಎಐಸಿಸಿ ದೇವಸ್ಥಾನ ಇದ್ದಂತೆ  ಯಾರೋಬ್ಬರು ಸುಖಾ ಸುಮ್ಮನೆ ಆರೋಪಮ ಮಾಡಿದರೇ ನಾವು ಸಹಿಸುವುದಿಲ್ಲ. ಈ ಮೊದಲು ಯಾರಾದರೂ ಎಐಸಿಸಿ ಬಗ್ಗೆ ಯಾವುದಾದರೂ ಆರೋಪ ಮಾಡಿದ್ದಾರಾ? ಎಂದು ಪ್ರಶ್ನಿಸಿದರು. 

ಎಐಸಿಸಿ ಎಂದರೆ ಒಂದು ಸಂಸ್ಥೆ. ಅಧ್ಯಕ್ಷರು ಪದಾಧಿಕಾರಿಗಳು ಇದ್ದಾರೆ. ಹಾಗಾಗಿ ಎಐಸಿಸಿ ಮೇಲೆ ಆರೋಪ ಮಾಡಿದರೇ ಅಧ್ಯಕ್ಷರ ಮೇಲೆ ಆರೋಪ ಮಾಡಿದಂತೆ. ನಿಯಮಾವಳಿ ಪ್ರಕಾರ ಅದಕ್ಕೆ ಅವಕಾಶವಿಲ್ಲ. ರಾಮದಾಸ್ ಅವರು ಸಭಾಧ್ಯಕ್ಷರ ಆದೇಶ ಉಲ್ಲಂಘನೆ ಮಾಡಿದ್ದಾರೆ. ಪೀಠಕ್ಕೆ ನೇರ ಸವಾಲು ಹಾಕಿದ್ದಾರೆ. ಇದಕ್ಕೆ ಅವಕಾಶ ಕೊಡಬಾರದು ಎಂದು ಸಚಿವ ಕೃಷ್ಣ ಬೈರೆಗೌಡ ಒತ್ತಾಯಿಸಿದರು.

ಆಗ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಆಕ್ಷೇಪಣೆ ವ್ಯಕ್ತಪಡಿಸಿ, ರಾಮದಾಸ್ ಅವರು ಯಾವುದೇ ವ್ಯಕ್ತಿಯ ವಿರುದ್ಧ ಆರೋಪಿಸಿಲ್ಲ. ಎಐಸಿಸಿ ಸಂಸ್ಥೆಯೇ ಹೊರತು ವ್ಯಕ್ತಿಯಲ್ಲ ಎಂದು ತಿರುಗೇಟು ನೀಡಿದರು.

ಇದಕ್ಕೆ ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ, ನಿಮ್ಮಲ್ಲಿರುವ ದಾಖಲೆಗಳನ್ನು ಕಾರ್ಯದರ್ಶಿ ಯವರಿಗೆ ಒಪ್ಪಿಸಿ, ನೊಟೀಸ್ ಕೊಟ್ಟು ಬಳಿಕ ಚರ್ಚೆಗೆ ಬನ್ನಿ ಎಂದು ಸೂಚಿಸಿದರು. 

ಆದರೆ ರಾಮದಾಸ್ ಇದಕ್ಕೆ ಒಪ್ಪದೆ, ಮೊದಲು ಚರ್ಚೆ ಆಗಲಿ, ನ್ಯಾಯಾಂಗ ತನಿಖೆಗೆ ಆದೇಶಿಸಿ. ಬಳಿಕ ನನ್ನ ಬಳಿ ಇರುವ ದಾಖಲೆಯನ್ನು ಸದನಕ್ಕೆ ಒಪ್ಪಿಸುತ್ತೇನೆ ಎಂದು ಪಟ್ಟು ಹಿಡಿದರು.  ಈ ವೇಳೆ ಸದನದಲ್ಲಿ ಗದ್ದಲ, ಜಟಾಪಟಿ ತೀವ್ರಗೊಂಡ ಹಿನ್ನೆಲೆಯಲ್ಲಿ ಸದನವನ್ನ ಮುಂದೂಡಿದರು.
Posted by: SD | Source: The New Indian Express

ಕನ್ನಡ ಮ್ಯಾಟ್ರಿಮನಿಯಲ್ಲಿ
ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ -
ನೋಂದಣಿ ಉಚಿತ!

Topics : Rs 50 crore, AICC, Party Fund, BJP, Allegation, 50 ಕೋಟಿ ರು. ಎಐಸಿಸಿ , ಪಕ್ಷದ ದೇಣಿಗೆ, ಬಿಜೆಪಿ, ಆರೋಪ,
English summary
A BJP member today accused the Karnataka government of 'diverting' Rs 50 crore from the budget to the Congress party fund, triggering an uproar in the assembly, leading to its adjournment.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS