Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
PM Modi and Rahul gandhi

ರಫೇಲ್ ಕುರಿತು ನನ್ನೊಂದಿಗೆ 15 ನಿಮಿಷ ಚರ್ಚೆ ನಡೆಸಿ: ಪ್ರಧಾನಿ ಮೋದಿಗೆ ರಾಹುಲ್ ಸವಾಲ್

Sanjay Mishra Appointed As Full-Time Chief Of Enforcement Directorate

ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿ ಸಂಜಯ್ ಮಿಶ್ರಾ ನೇಮಕ!

Another civilian abducted, killed by terrorists in Jammu And Kashmir

ಕಾಶ್ಮೀರದಲ್ಲಿ ಮುಂದುವರೆದ ಉಗ್ರರ ಅಟ್ಟಹಾಸ, ಮತ್ತೋರ್ವ ನಾಗರಿಕನ ಅಪಹರಣ, ಹತ್ಯೆ

File photo

ಜಮ್ಮು-ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Women Cry Rape To Get Back At Ex-Boyfriends, Says Haryana Chief Minister

ಬಾಯ್ ಫ್ರೆಂಡ್ ವಾಪಸ್ ಪಡೆಯಲು ಮಹಿಳೆಯರಿಂದ ಅತ್ಯಾಚಾರ ಅಸ್ತ್ರದ ಬಳಕೆ: ಸಿಎಂ ಖಟ್ಟರ್ ಹೊಸ ವಿವಾದ

Ambulance rams into lorry

ಬೆಂಗಳೂರು: ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ; ನಾಲ್ವರ ಸಾವು

After KGF Trailer Success, Yash And Radhika gave Sweet news for Fans

ಯಶ್-ರಾಧಿಕಾ ದಂಪತಿ ಮದುವೆಯಾದ ಡಿಸೆಂಬರ್ 9 ರಂದೇ ಜೂನಿಯರ್ ರಾಕಿಂಗ್ ಸ್ಟಾರ್ ಆಗಮನ?

Y S V Datta

ಉತ್ತರ ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರದ ಅಗತ್ಯವಿದೆ: ವೈ ಎಸ್ ವಿ ದತ್ತ

this is a story of determination, grit and willpower: Wife Priya on Kiccha Sudeep

ನಿಮ್ಮ ಪರಿಶ್ರಮದ ಪ್ರತಿಫಲ ಎಂದ ಪತ್ನಿ ಪ್ರಿಯಾ, ನಿನೇ ನನಗೆ ಸ್ಪೂರ್ತಿ ಎಂದ ಕಿಚ್ಚಾ ಸುದೀಪ್!

K Surendran

ಶಬರಿಮಲೆ ದೇಗುಲ ಪ್ರವೇಶ ಯತ್ನ: ಮುಂಜಾಗರೂಕ ಕ್ರಮವಾಗಿ ಬಿಜೆಪಿ ನಾಯಕ ಕೆ.ಸುರೇಂದ್ರನ್ ಬಂಧನ

Casual Protest

ಉತ್ತರ ಕನ್ನಡ ಮೀನುಗಾರರ ಪ್ರತಿಭಟನೆ: ಗೋವಾ ಕಂಟೈನರ್ ಗಳನ್ನು ಹಿಂದಕ್ಕೆ ಕಳುಹಿಸಿದ ಪ್ರತಿಭಟನಾಕಾರರು

Police in RFO Office

ಹೊಸನಗರ: ಪ್ರತಿಭಟನಾನಿರತ ರೈತ ನಿಧನ, ಆರ್ ಎಫ್ ಓ ವಿರುದ್ಧ ಪ್ರಕರಣ ದಾಖಲು

Delhi Chief Secretary Anshu Prakash, who accused Kejriwal of assault transferred to telecom dept

ಸಿಎಂ ಕೇಜ್ರಿವಾಲ್ ವಿರುದ್ಧ ಹಲ್ಲೆ ಆರೋಪ ಮಾಡಿದ್ದ ದೆಹಲಿ ಮುಖ್ಯ ಕಾರ್ಯದರ್ಶಿ ಎತ್ತಂಗಡಿ!

ಮುಖಪುಟ >> ಪ್ರವಾಸ-ವಾಹನ

ಶಿರಡಿ, ನಾಸಿಕ ಪ್ರವಾಸ: ಗುರು ಕರುಣೆಯೊಡನೆ ದೈವ ಸನ್ನಿದಿಯ ದರ್ಶನ

Sai Baba of Shirdi

ಶಿರಡಿ ಸಾಯಿಬಾಬಾ

ಮಹಾರಾಷ್ಟ್ರದ ಶಿರಡಿ ಸಾಯಿ ಬಾಬಾ ನೆಲೆಸಿರುವ ಪ್ರಸಿದ್ದ ಪುಣ್ಯ ಕ್ಷೇತ್ರ. ದೇಶದ ನಾನಾ ಕಡೆಗಳಿಂದ ದಿನನಿತ್ಯ ಸಾವಿರ ಸಾವಿರ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗಾಗಮಿಸಿ ಗುರುವಿನ ಕೃಪೆಗೆ ಪಾತ್ರರಾಗುತ್ತಾರೆ. ಇಂತಹಾ ಶಿರಡಿ ಕ್ಷೇತ್ರದ ಜತೆಗೆ ಅದೇ ಸುತ್ತ ಮುತ್ತಲ ಇತರೇ ಕ್ಷೇತ್ರಗಳ ಭೇಟಿಗೆ ಪ್ರವಾಸಿಗರಿಗೆ ಶಿರಡಿ ಕೇಂದ್ರ ಸ್ಥಳವಾಗಲಿದೆ.

ಕರ್ನಾಟಕ ಸೇರಿ ದೇಶದ ಎಲ್ಲೆಡೆಗಳಿಂಡ ಉತ್ತಮ ರಸ್ತೆ, ರೈಲು ಸಂಪರ್ಕ ಹೊಂದಿರುವ  ಶಿರಡಿಯ ಸಮೀಪವೇ ಇತ್ತೀಚೆಗೆ ವಿಮಾನ ನಿಲ್ದಾಣ ಸಹ  ಪ್ರಾರಂಭಗೊಂಡಿದೆ. ಹೀಗಾಗಿ ಶಿರಡಿಗೆ ಯಾವಗಲಾದರೂ ಸುಲಭವಾಗಿ ತಲುಪಬಹುದು. ಶಿರಡಿಯಲ್ಲಿ ತಂಗಲು ಸಾಕಷ್ಟು ಹೋಟೆಲ್, ವಸತಿ ಗೃಹಗಳೂ ಲಭ್ಯವಿದೆ. ಶಿರಡಿ ಸಾಯಿಬಾಬಾ ಮಂದಿರದ ವಸತಿ ವ್ಯವಸ್ಥೆ ಸಹ ಕಡಿಮೆ ಬಜೆಟ್ ನಲ್ಲಿ ಉತ್ತಮ ಗುಣಮಟ್ಟದ ಕೋಣೆಗಳನ್ನು ಹೊಂದಿದೆ.

ಮಹಾರಾಷ್ಟ್ರ ಅಹಮದ್ ನಗರ ಜಿಲ್ಲೆಯಲ್ಲಿರುವ ಶಿರಡಿ ಪುಟ್ಟ ಗ್ರಾಮವಾದರೂ ಸಾಯಿಬಾಬಾ ಮಂದಿರದ ಕಾರಣ ದೇಶಾದ್ಯಂತ ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುವ ತಾಣ. ಶಿರಡಿಯ ಕೇಂದ್ರ ಭಾಗದಲ್ಲಿ ಸಾಯಿಬಾಬಾ ಸಮಾಧಿ ಮಂದಿರವಿದೆ. ಬೆಳಿಗ್ಗೆ 4ಕ್ಕೆ ತೆರೆಯುವ ಈ ಮಂದಿರ ರಾತ್ರಿ 11ಕ್ಕೆ ಮುಚ್ಚಲ್ಪಡುತ್ತದೆ. ಇದೇ ಮಂದಿರದ ಸನಿಹದಲ್ಲಿ ಬಾಬಾ ಅವರು ನೆಲೆಸಿದ್ದ ದ್ವಾರಕಾಮಾಯಿ ಮಸೀದಿ, ಬಾಬಾ ಅವರ ಚಾವಡಿ (ನ್ಯಾಯ ನಿರ್ಣಯ ಸ್ಥಳ), ಗಣೇಶ, ಆಂಜನೇಯನ ಗುಡಿಗಳೂ ಇದೆ. ಸಾಯಿ ಮಂದಿರಕ್ಕೆ ತೆರಳಿದವರು ಈ ಎಲ್ಲಾ ಸ್ಥಳಕ್ಕೂ ಭೇಟಿ ನೀಡುತ್ತಾರೆ.

ದೇವಾಲಯದ ಆವರಣದಲ್ಲಿ ಸಾಯಿಬಾಬಾ ಜೀವನದ ಪ್ರಮುಖ ಘಟ್ಟಗಳಲ್ಲಿ ತೆಗೆಯಲಾದ ಛಾಯಾಚಿತ್ರಗಳಿರುವ ವಸ್ತು ಸಂಗ್ರಹಾಲವೂ ಇದೆ.

ವಿಶೇಷವೆಂದರೆ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ನಾನಾ ದೇವಾಲಯದಲ್ಲಿರುವಂತೆಯೇ ಇಲ್ಲಿಯೂ ಜನಸಂದಣಿ ಅಧಿಕವಾಗಿದ್ದು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯಬೇಕು. ಬಾಬಾ ಸಮಾಧಿ ಮಂದಿರ ದರ್ಶನ ಅಥವಾ ಆರತಿಗೆ ಮುಂಗಡ ಆನ್ ಲೈನ್ ಟಿಕೆಟ್ ಕಾಯ್ದಿರಿಸುವ ಸೌಲಭ್ಯವಿದೆ. ದರ್ಶನಕ್ಕೆ 300 ರೂಪಾಯಿಯಾದರೆ ಆರತಿಗೆ 600 ರೂ. ಟಿಕೆಟ್ ದರವಿದೆ. ದೇವಳದ ವಸತಿ ನಿಲಯದಲ್ಲಿ ಒಂದು ಸಾವಿರ ಕೊಠಡಿಗಳಿದ್ದು ಒಂದಕ್ಕೆ 300 ರೂ. ನಂತೆ ಮುಂಗಡ ಕಾಯ್ದಿರಿಸಿಬಹುದು.

ಶಿರಡಿಗೆ ತೆರಳಲು ನಾವುಗಳು ಪ್ಯಾಕೇಜ್ ಟೂರ್ ಆಯ್ಕೆ ಮಾಡಿಕೊಂಡಿದ್ದೆವು. ಈ ಪ್ಯಾಕೇಜಿನಲ್ಲಿ ಶಿರಡಿ, ನಾಸಿಕ, ಪಂಚವಟಿ, ಶನಿಶಿಂಗಣಾಪುರ ಸೇರಿತ್ತು. ನಾವು ಮೊದಲು ಮುಂಬೈನಿಂದ ನಾಸಿಕದ ಸುಪ್ರಸಿದ್ದ ತ್ರಯಂಬಕೇಶ್ವರದತ್ತ ತೆರಳಿದೆವು.

ನಾಸಿಕ ಪಟ್ಟಣದಿಂದ ಸುಮಾರು ಮುಕ್ಕಾಲು ಗಂಟೆ ಪ್ರಯಾಣದ ಊರು (ಸುಮಾರು 30 ಕಿ.ಮೀ) ತ್ರಯಂಬಕೇಶ್ವರ. ಸುಮಾರು 700  ವರ್ಷಗಳಷ್ಟು ಹಳೆಯ ದೇವಾಲಯವಾದ ತ್ರಯಂಬಕೇಶ್ವರ ದೇವಾಲಯ ಭಾರತದಲ್ಲಿ ಪ್ರಖ್ಯಾತವಾದ ದ್ವಾದಶ ಜ್ಯೋತಿರ್ಲಿಂಗಗಳಲ್ಲಿ 10ನೇ ಜ್ಯೋತಿರ್ಲಿಂಗವಾಗಿದೆ. ವಿಶೇಷವೆಂದರೆ ಇಲ್ಲಿ ಮೂರು ಚಿಕ್ಕ ಚಿಕ್ಕ ಶಿವಲಿಂಗಗಳಿದ್ದು ಇದನ್ನು ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರ ರೂಪ ಎನ್ನಲಾಗುತ್ತದೆ. ಭಾರತದ ಇನ್ನಾವ ಜ್ಯೋತಿರ್ಲಿಂಗ ಕ್ಷೇತ್ರದಲ್ಲಿ ಸಹ ಈ ರೀತಿ ಮೂರು ಲಿಂಗಗಳು ಒಟ್ಟಾಗಿಲ್ಲ ಎನ್ನುವುದು ಗಮನಾರ್ಹ.

ಇದೇ ತ್ರಯಂಬಕೇಶ್ವರ ಸನ್ನಿಧಿಯಲ್ಲಿಯೇ ಭಾರತದ ಪುಣ್ಯನದಿಗಳಲ್ಲೊಂದಾದ ಗೋದಾವರಿ ಉಗಮವಾಗುತ್ತದೆ. ಇದೇ ಸಮೀಪದಲ್ಲಿರುವ ಬ್ರಹ್ಮಗಿರಿ  ಬೆಟ್ಟದ ಮೇಲೆ ಹಿಂದೆ ಗೌತಮ ಮಹರ್ಷಿಗಳು ಅಹಲ್ಯೆಯೊಡನೆ ನೆಲೆಸಿದ್ದರು ಎನ್ನಲಾಗುತ್ತದೆ. ಇಂದಿಗೂ ಈ ಗಿರಿಶ್ರೇಣಿಯಲ್ಲಿ ಗೌತಮ, ಅಹಲ್ಯೆಯರಿಗೆ ಮೀಸಲಾದ ಪುಟ್ಟ ಗುಡಿ ಇದೆ. ಅಲ್ಲದೆ ಪ್ರಕೃತಿ ಪ್ರಿಯರಿಗೆ ಇಲ್ಲಿ ಅತ್ಯದ್ಭುತ ಪ್ರಾಕೃತಿಕ ನೋಟಗಳನ್ನು ಹೊತ್ತ ಸುಂದರ ದೃಶ್ಯಗಗಳನ್ನು ಕಾಣಬಹುದಾಗಿದೆ. ಇದೇ ಬೆಟ್ಟದಲ್ಲಿ ಹುಟ್ಟುವ ಇನ್ನೂ ಎರಡು ಪಟ್ಟ ನದಿಗಳು ತ್ರಯಂಬಕೇಶ್ವರದಲ್ಲಿ ಗೋದಾವರಿಯೊಡನೆ ಸಂಗಮವಾಗುತ್ತದೆ. ಇದೇ ಸಂಗಮದಲ್ಲಿ ಪ್ರತಿ 12 ವರ್ಷಕ್ಕೊಮ್ಮೆ ವಿಶ್ವ ಪ್ರಸಿದ್ದ ನಾಸಿಕ ಕುಂಭಮೇಳವು ನಡೆದು ಲಕ್ಷಾಂತರ ಯಾತ್ರಾರ್ಥಿಗಳು ಪಾಲ್ಗೊಳ್ಳುತ್ತಾರೆ.

ನಾವು ತ್ರಯಂಬಕೇಶ್ವರನ  ದರ್ಶನ ಪಡೆದು ಅಲ್ಲಿಂದ ನಾಸಿಕದಿಂದ 2 ಕಿ.ಮೀ. ಇರುವ  ಪಂಚವಟಿಗೆ ತೆರಳಿದೆವು.

ಇದು ಸುಂದರವಾದ ಧಾರ್ಮಿಕ ಕ್ಷೇತ್ರವಾಗಿದ್ದು 5 ವಟವೃಕ್ಷ (ಆಲದ ಮರ) ಗಳಿರುವ ಊರು ಎನ್ನುವ ಅರ್ಥ ಇರುವ ಇದೇ ಸ್ಥಳದಲ್ಲಿ ವನವಾಸದ ಸಮಯದಲ್ಲಿ  ರಾಮ, ಲಕ್ಷ್ಮಣರು ಸೀತೆಯೊಡನೆ ವಾಸವಿದ್ದರು.  ಶೂರ್ಪನಖಿ ಮೂಲಕ ಸೀತೆಯ ವಿಚಾರ ತಿಳಿದ ರಾವಣ ಇಲ್ಲಿಂದಲೇ ಆಕೆಯನ್ನು ಅಪಹರಿಸಿಕೊಂಡು ಹೋಗಿದ್ದನೆನ್ನಲಾಗುತ್ತದೆ. ಇಲ್ಲಿರುವ ಸೀತಾಗುಹ (ಸೀತೆಯ ಗುಹೆ), ಕಾಲಾರಾಮ, ಗೋರಾರಾಮ ಮಂದಿರಗಳು (ಕಪ್ಪು ರಾಮ ಹಾಗೂ ಬಿಳಿ ರಾಮನ ಮೂರ್ತಿಗಳಿರುವ ಪ್ರತ್ಯೇಕ ದೇವಾಲಯ) ನೋಡಲು ಅತ್ಯಂತ ಆಕರ್ಷಕವಾಗಿದೆ.

ಇಲ್ಲಿರುವ ರಾಮಕುಂಡ ಸಹ ಅತ್ಯಂತ ಪ್ರಸಿದ್ದವಾದದ್ದು ಇಲ್ಲಿ ಶ್ರೀರಾಮನು ದಶರಥ ಮಹಾರಾಜನಿಗೆ ಪಿಂಡ ಪ್ರಧಾನ ಮಾಡಿದ ಎನ್ನಲಾಗುತ್ತದೆ.

ಇನ್ನು ನಾಸಿಕ (ಶೂರ್ಪನಖಿಯ ಮೂಗನ್ನು ಲಕ್ಷ್ಮಣ ಕತ್ತರಿಸಿದ್ದ ಸ್ಥಳ ಎನ್ನುವ ಅರ್ಥದಲ್ಲಿ ಬಳಕಯಾಗುತ್ತಿದೆ) ಪಟ್ಟಣವು ಭಾರತ  "ವೈನ್ ಕ್ಯಾಪಿಟಲ್" ಭಾರತದ ಒಟ್ಟಾರೆ ವೈನ್ ಉತ್ಪಾದಿಸುವ ಘಟಕಗಳ ಪೈಕಿ ಅರ್ಧದಷ್ಟು ಘಟಕಗಳು ನಾಸಿಕ್ ನಲ್ಲಿವೆ. ವಾರ್ಷಿಕ 10,000 ಟನ್ ಗಿಂತಲೂ ಹೆಚ್ಚು ಪ್ರಮಾಣದ ದ್ರಾಕ್ಷಿಯನ್ನು ನಾಸಿಕ್  ನಲ್ಲಿ ಬೆಳೆಯಲಾಗುತ್ತದೆ. ಸುಳಾ ದ್ರಾಕ್ಷಾ ರಸ ಪ್ರಸಿದ್ಧವಾಗಿದ್ದು ಸುಳಾ ಉತ್ಸವ ಕೂಡ ಇಲ್ಲಿ ಜರುಗುತ್ತದೆ.

ಪಂಚವಟಿಯ ಶ್ರೀರಾಮನ ದರ್ಶನ ನಾವುಗಳು ಅಲ್ಲಿಂದ ಶಿರಡಿಯತ್ತ ತೆರಳಿದೆವು. ಶಿರಡಿಗೆ ತೆರಳಿ ಅಲ್ಲಿ ಮೊದಲೇ ಕಾಯ್ದಿರಿಸಲಾಗಿದ್ದ ಹೋಟೆಲ್ ಕೋಣೆಯಲ್ಲಿ ರಾತ್ರಿ ತಂಗಿದ್ದು ಬೆಳಿಗ್ಗೆ 6ಕ್ಕೆ ಮೊದಲೇ ನಿಗದಿಯಾದಂತೆ ಸಾಯಿಬಾಬಾ ದರ್ಶನಕ್ಕೆ ಹೊರಟೆವು. ಮಂದಿರ ಪ್ರವೇಶಿಸಿ ಸಮಾಧಿ ದರ್ಶನ ಪಡೆವಾಗಲೂ ಸರತಿ ಸಾಲಿನಲ್ಲೇ ಹೋಗಬೇಕಾಗಿತ್ತು.

ಅಷ್ಟೆಲ್ಲಾ ಜನಸಂದಣಿಯ ನಡುವೆಯೇ ಸಾಯಿಬಾಬಾ ಸಮಾಧಿಯ ಸಮೀಪದಲ್ಲೇ ಎರಡು ನಾಯಿಗಳು ಏನೂ ಗೊತ್ತಿಲ್ಲದಂತೆ ಮಲಗಿದ್ದದ್ದು ಅಚ್ಚರಿ ತಂದಿತ್ತು. ಸಾಯಿಬಾಬಾ ಅವರಿಗೆ ನಾಯಿಗಳೆಂದರೆ ಪ್ರೀತಿಯೆಂದೂ, ನಾಯಿಗಳು ದೇಗುಲದಲ್ಲಿ ಸದಾ ಕಾಲ ಇರುತ್ತವೆಂದೂ ನಮ್ಮ ಪ್ರವಾಸಿ ಮಾರ್ಗದರ್ಶಕ (ಗೈಡ್) ಹೇಳಿದರು.

ಹೀಗೆ ಸಾಯಿಬಾಬಾ ಮಂದಿರ, ದ್ವಾರಕಾಮಾಯಿ ಸೇರಿ ಸುತ್ತಲ ದೇವಾಲಯಗಳ ದರ್ಶನ ಪಡೆದು ಹೊರಬರುವಾಗ ಗಂಟೆ 9 ಗಂಟೆಯಾಗಿತ್ತು.. ಹೋಟೆಲ್ ಚೆಕ್ ಔಟ್ ಮಧ್ಯಾಹ್ನ 12ಕ್ಕೆ ನಿಗದಿಯಾಗಿದ್ದು ಅಲ್ಲಿಯವರೆಗೆ ಶಾಪಿಂಗ್ ಗೆ ಅವಕಾಶವಿತ್ತು. ನಾವು ದೇವಾಲಯ ಸುತ್ತಲಿನಲ್ಲಿರುವ ಸಿಹಿತಿಂಡಿ, ಬಾಬಾ ಮೂರ್ತಿಗಳನ್ನು ಸಾಲಾಗಿಜೋಡಿಸಿಟ್ಟ ಅಂಗಡಿಗಳ ಸಾಲಿನುದ್ದಕ್ಕೆ ಸಾಗಿದೆವು. ಬಾಬಾ ಮೂರ್ತಿಗಳು, ಛಾಯಾಚಿತ್ರಗಳು, ಮಣಿಸರ ಸೇರಿ ಸಿಹಿ ತಿಂಡಿಗಳ ಅಂಗಡಿಗಳ ಸಾಲು ಸಾಲೇ ಅಲ್ಲಿದ್ದು ಪ್ರವಾಸಿ ತಾಣವಾಗಿರುವ ಕಾರಣ ಬೆಲೆಗಳೆಲ್ಲಾ ತುಸು ಅಧಿಕವಾಗಿದ್ದವು.

ನಂತರ ಶಿರಡಿ ಬಸ್ ನಿಲ್ದಾಣದ ಬಳಿ ಇರುವ ಖಂಡೋಬಾ ಮಂದಿರಕ್ಕೆ ತೆರಳಿದೆವು. ಸಾಯಿ ಬಾಬಾ ಪ್ರಥಮ ಬಾರಿಗೆ ಕಾಣಿಸಿಕೊಂಡದ್ದು ಇದೇ ಮಂದಿರದಲ್ಲಿರುವ ಮರದ ಬಳಿಯಲ್ಲಿ. ಅದಾಗ ಅಲ್ಲಿನ ಅರ್ಚಕ ಪ್ರಮುಖರೊಬ್ಬರು 'ಆವೋ ಸಾಯಿ' ಎಂದು ಕರೆದರು. ಅದುವೇ ಬಾಬಾ ಅವರ ಖಾಯಂ ಹೆಸರಾಯಿತು ಎನ್ನಲಾಗುತ್ತದೆ.

ಶಿರಡಿಯಲ್ಲಿ ಬಾಬಾ ಒಟ್ಟು 64 ವರ್ಷಗಳ ಕಾಲ ಬದುಕಿದ್ದರು ಕ್ರಿ.ಶ. 1918 ವಿಜಯದಶಮಿಯ ದಿನದಂದು ಅವರು ಸಮಾಧಿಸ್ಥರಾದರು. ಎಂದರೆ ಈ ವರ್ಷ (2018 ಸಾಯಿ ಬಾಬಾ ಸಮಾಧಿಯಾಗಿ ನೂರನೇ ವರ್ಷವಾಗಿದೆ. ಈ ಪ್ರಯುಕ್ತ ವರ್ಷ ಪೂರ್ತಿ ದೇವ ಮಂದಿರದಲ್ಲಿ ವಿಶೇಷ ಕಾರ್ಯಕ್ರಮಗಳಿದ್ದು ಬರುವ ವಿಜಯದರ್ಶಮಿಯಂದು ಅತ್ಯಂತ ವೈಭವದ ಬಾಬಾ ನೂರನೇ ಸಮಾಧಿ ವರ್ಷೋತ್ಸವ ಹಮ್ಮಿಕೊಳ್ಳಲಾಗಿದೆ.

ಮಧ್ಯಾಹ್ನ 12ಕ್ಕೆ ನಾವು ಶಿರಡಿಯ ಆಗ್ನೇಯಕ್ಕೆ ಸುಮಾರು 75 ಕಿ.ಮೀ ದೂರದಲ್ಲಿರುವ ಶನಿ ದೇವರ ಸನ್ನಿಧಾನ ಶನಿಶಿಂಗಣಾಪುರಕ್ಕೆ ತೆರಳಿದೆವು.

ಶನಿದೇವರೇ ನೆಲೆ ನಿಂತಿರುವ ಈ ಗ್ರಾಮ ದೇಶದಲ್ಲಿ ಪ್ರಖ್ಯಾತವಾಗಿದ್ದು ಸಹಸ್ರಾರು ಜನ ನಿತ್ಯವೂ ದೇಶದಲ್ಲಿ ಪ್ರಖ್ಯಾತವಾಗಿದ್ದು ಸಹಸ್ರಾರು ಜನ ನಿತ್ಯವೂ ಇಲ್ಲಿಗೆ ಆಗಮಿಸುವರು. ವಿಶೇಷವೆಂದರೆ ಈ ಶನಿದೇವರ ಮಂದಿರಕ್ಕೆ ಯಾವ ಬಾಗಿಲು, ಕಿಟಕಿ, ಗೋಪುರಗಳಲ್ಲ. ಬಯಲಿನ ನಡುವೆಯೇ ನಿಂತಿರುವ ಶನಿದೇವರ ನೆಲೆಯಾದ ಈ ಊರಿನಲ್ಲಿರುವ ಮನೆ, ಅಂಗಡಿ, ಬ್ಯಾಂಕ್, ಶಾಲೆಯಂತಹಾ ಕಛೇರಿಗಳಿಗೆ ಸಹ ಬಾಗಿಲು, ಬೀಗಗಳಿಲ್ಲ! ಇಲ್ಲಿ ಕಳ್ಳತನ ಮಾಡಿದ್ದರೆ ಶನಿದೇವರ ಪ್ರಕೋಪಕ್ಕೆ ಈಡಾಗಬೇಕಾಗುವುದು ಎನ್ನುವ ನಂಬಿಕೆ ಇದ್ದು ಶನಿದೇವರ ಅಣತಿಯಂತೆಯೇ ಇಲ್ಲಿ ಯಾರ ಮನೆ, ಕಛೇರಿಗಳಿಗೆ ಬಾಗಿಲು ಇರುವುದಿಲ್ಲವಂತೆ.

ದಂತಕಥೆಯಂತೆ ಇಲ್ಲಿನ ಹಳ್ಳಿಗಾಡಿನ ಕುರಿ ಮೇಯಿಸುವವನೊಬ್ಬನಿಗೆ ಈ ಹೊಳಪುಳ್ಳ ಕರಿಶಿಲೆ ಕಾಣಿಸಿತು. ಆತ ಕುತೂಹಲಗೊಂಡು ತನ್ನ ಬಳಿಯಿದ್ದ ಕೋಲಿಂದ ಅದನ್ನು ತಿವಿಯಲು ಅದರಿಂದ ರಕ್ತ ಒಸರಿತು. ಇದನ್ನು ಕಂಡು ಗಾಬರಿಗೊಂಡ ಆತ ಹಳ್ಳಿಯ ಇತರರಿಗೆ ಈ ವಿಚಾರ ತಿಳಿಸಿದ. ಅಂದಿನ ರಾತ್ರಿ ಆ ಹಳ್ಳಿಯಲಿದ್ದ ಭಕ್ತನೊಬ್ಬನ ಕನಸಿನಲ್ಲಿ ಕಾಣಿಸಿಕೊಂಡ ಶನಿದೇವ 'ನಾನು ಈ ಗ್ರಾಮದಲ್ಲಿ ನೆಲೆಸುವವನಿದ್ದೇನೆ. ಈ ಕರಿಶಿಲೆಯನ್ನು ಪ್ರತಿಷ್ಠಾಪಿಸಿ ನಿತ್ಯವೂ ಪೂಜೆ, ತೈಲಾಭಿಷೇಕ ನೆರವೇರಿಸಿರಿ. ಮುಂದೆ ಇಲ್ಲೆಲ್ಲೆ ಆಗಲಿ ಕಳ್ಳತನವಾಗದಂತೆ ನಾನು ನೋಡಿಕೊಳ್ಳುವೆನು' ಎಂದು ಆದೇಶಿಸಿದ.

ಅದರಂತೆ ಆ ಕರಿಶಿಲೆಯನ್ನು ಊರ ನಡುವೆ ಪ್ರತಿಷ್ಠಾಪಿಸಲಾಗಿದ್ದು ಅಂದಿನಿಂದ ಇಂದಿನವರೆಗೆ ಶನಿದೇವರಿಗೆ ನಿತ್ಯ ಪೂಜೆ, ತೈಲಾಭಿಷೇಕಗಳು ನಡೆಯುತ್ತಿದೆ.

ನಾವೂ ಸಹ ಆ ವಿಸ್ಮಯಕಾಇ ಶಿಲೆಯನ್ನು ವೀಕ್ಷಿಸಿ ಅಚ್ಚರಿಗೊಂಡೆವು. ಅಲ್ಲಿಂದ ಸಂಜೆ 5.30ರ ವೇಳೆಗೆ ಶಿರಡಿಗೆ ಮರಳಿದ ನಾವು ಅದೇ ರಾತ್ರಿ ಮುಂಬೈ ನಗರಕ್ಕೆ ವಾಪಾಸಾದೆವು. ಹೀಗೆ ಶಿರಡಿ, ನಾಸಿಕ ಪ್ರವಾಸ ನಮ್ಮ ನೆನಪುಗಳ ಪುಟದಲ್ಲಿ ಸೇರಿ ಹೋಯಿತು.

- ರಾಘವೇಂದ್ರ ಅಡಿಗ ಎಚ್ಚೆನ್.
raghavendraadiga1000@gmail.com
Posted by: RHN | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Shirdi, Nasik, Shani Shingnapur, Sai Baba of Shirdi, ಶಿರಡಿ, ನಾಸಿಕ್, ಶನಿ ಶಿಂಗಣಾಪುರ, ಶಿರಡಿ ಸಾಯಿಬಾಬಾ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS